ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಉದ್ಘಾಟನೆಗಾಗಿ ಬಹುದಿನಗಳಿಂದ ಕಾಯುತ್ತಿತ್ತು. ಅದೀಗ ನನಸಾಗುತ್ತಿದೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ಹಾವೇರಿ ಜಿಲ್ಲೆಯ ಶಿಗ್ಗಾಂವಿ ಸಮೀಪದ ಗೊಟಗೋಡಿಯಲ್ಲಿ ಇದೇ 16ರಂದು ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ವಿ.ವಿ. ಉದ್ಘಾಟನೆ ನೆರವೇರಿಸಲಿದ್ದಾರೆ.
ವಿ.ವಿ. ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಒಪ್ಪಿದ್ದಾರೆ ಎಂದು ಕುಲಪತಿ ಡಾ. ಅಂಬಳಿಕೆ ಹಿರಿಯಣ್ಣ ಪತ್ರಿಕೆಗಳಿಗೆ ತಿಳಿಸಿದ್ದಾರೆ.
ಈ ವಿಶ್ವವಿದ್ಯಾಲಯ ಸ್ಥಾಪನೆಗೆ ಗೊ.ರು.ಚ ಅವರ ಶ್ರಮ ದೊಡ್ಡದು. ವಿವಿಯ ಮೊದಲ ಕುಲಪತಿಗಳಾದ ಪ್ರೊ. ಅಂಬಳಿಕೆ ಹಿರಿಯಣ್ಣ ಅವರು ವಿವಿಯನ್ನು ಜನರ ಆಲೋಚನಾ ಕ್ರಮದ ಮೂಲಕ ಅಭಿವೃದ್ಧಿ ಪಡಿಸುವ ಕನಸುಗಳನ್ನು ಹೇಳಿಕೊಂಡಿದ್ದಾರೆ. ಅದು ನೆರವೇರಲಿ. ಜಾನಪದ ವಿಶ್ವವಿದ್ಯಾಲಯ ಉದ್ಘಟನೆಗೊಳ್ಳುತ್ತಿರುವ ಈ ಹೊತ್ತಲ್ಲಿ ಕನ್ನಡ ಜಾನಪದ ಬ್ಲಾಗ್ ಶುಭ ಕೋರುತ್ತದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ