-ಅರುಣ್ ಜೋಳದಕೂಡ್ಲಿಗಿ
ಅನನ್ಯತೆ ಎನ್ನುವ ಅಕಾಡೆಮಿಕ್ ಪರಿಭಾಷೆಯ ಬಗ್ಗೆ ಸ್ಪಷ್ಟಗೊಳಿಸಿದರೆ, ಅಥವಾ ಸರಳಗೊಳಿಸಿದರೆ ಮುಂದಿನ ಚರ್ಚೆ ಸಲೀಸಾಗಿ ಅರ್ಥವಾಗಬಹುದು ಅನ್ನಿಸುತ್ತದೆ. ಅನನ್ಯತೆಯನ್ನು ಗುರುತು, ಚಹರೆ, ತನ್ನದೇ ತಮ್ಮದೇ ಆದ ವಿಶಿಷ್ಟತೆ, ಬೇರೆಯವರು ಸುಲಭವಾಗಿ ಗುರುತಿಸುವಿಕೆಯ ಒಂದು ವಿಶಿಷ್ಟ ಅಂಶ ಎಂದು ಕರೆಯುತ್ತೇವೆ. ಉದಾಹರಣೆಗೆ ಕನ್ನಡ ಕಥನ ಸಾಹಿತ್ಯದಲ್ಲಿ ಕೆಲವು ಅನನ್ಯವಾದ ಲಕ್ಷಣಗಳಿವೆ. ತೇಜಸ್ವಿಯವರ ಬರಹದ ಮಾದರಿ ಮತ್ತಾರ ಬರಹದಲ್ಲೂ ಕಾಣುವುದಿಲ್ಲ. ಕುಂ.ವಿ ಅವರ ಕಥನ ಶೈಲಿ ಅವರಿಗೆ ಮಾತ್ರ ವಿಶಿಷ್ಟವಾದುದು ಇದು ಬೇರೆಯ ಲೇಖಕರಲ್ಲಿ ಕಾಣಸಿಗುವುದಿಲ್ಲ. ಹೀಗೆ ಸಂಸ್ಕೃತಿಯಲ್ಲೂ ಸಮುದಾಯಗಳಲ್ಲೂ ಕೆಲವು ವಿಶಿಷ್ಟ ಅಂಶಗಳಿರುತ್ತವೆ.
ಉದಾ: ಲಂಬಾಣಿ ಸಮುದಾಯದ ಮಹಿಳೆಯರು ಹಾಕುವ ಉಡುಪು ಅವರಿಗೇ ವಿಶಿಷ್ಟವಾದದ್ದು. ಒಬ್ಬ ಲಂಬಾಣಿ ಮಹಿಳೆ ಎಲ್ಲಿಯೇ ಇದ್ದರು ಉಡುಪಿನ ಆಧಾರದ ಮೇಲೆಯೆ ಲಂಬಾಣಿ ಸಮುದಾಯದ ಮಹಿಳೆ ಎಂದು ಗುರುತು ಹಚ್ಚಬಹುದು. ಅದೇ ಲಂಬಾಣಿ ಸಮುದಾಯದ ಮಹಿಳೆ ಸಾಮಾನ್ಯವಾಗಿ ಎಲ್ಲಾ ಮಹಿಳೆಯರು ಹಾಕುವ ಚೂಡಿದಾರವನ್ನಾಗಲಿ ಸೀರೆಯನ್ನಾಗಲಿ ಹಾಕಿದರೆ ಈ ಮಹಿಳೆ ಲಂಬಾಣಿ ಸಮುದಾಯಕ್ಕೆ ಸೇರಿದವಳು ಎಂದು ಗುರುತಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಹೀಗೆ ಗುರುತು ಕಳೆದುಕೊಳ್ಳುವುದು ಕೂಡ ಜಾನಪದ ಅಧ್ಯಯನಕಾರರ ದೊಡ್ಡ ಆತಂಕಕಗಳಲ್ಲಿ ಒಂದಾಗಿದೆ.
ಹೀಗೆ ಆಯಾ ಸಮುದಾಯಗಳ ಗುರುತುಗಳು ಯಾವುವು ಎಂದು ಪತ್ಯೆಹಚ್ಚುವುದು, ಆ ಗುರುತುಗಳು ಈಗ ಇವೆಯೇ ಇಲ್ಲವೇ ಎಂದು ಹುಡುಕುವುದು. ಇಲ್ಲದೆ ಇದ್ದರೆ ಹೀಗಿತ್ತು ಎಂದು ಅದನ್ನು ಸಂಗ್ರಹಿಸಿ ಮ್ಯೂಜಿಯಂನಲ್ಲಿಡುವುದು. ಅಯ್ಯೋ ಆ ಸಮುದಾಯ ತನ್ನ ಗುರುತನ್ನು ಕಳೆದುಕೊಂಡಿತಲ್ಲಾ ಎಂದು ಬಹುಪಾಲು ಜಾನಪದ ಅಧ್ಯಯನಕಾರರು ದುಃಖ ವ್ಯಕ್ತಪಡಿಸುವುದು ಕಾಣುತ್ತದೆ.
ಇಂತಹ ಗುರುತುಗಳೆ ಕೆಲವು ಸಮುದಾಯಗಳಿಗೆ ಶಾಪ ಮತ್ತು ಅವಮಾನವಾಗಿದೆ. ಅಂತೆಯೇ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿವೆ. ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಎಂಜಲೆಲೆ ಮೇಲೆ ಉರುಳಾಡುವುದು ಅಲ್ಲಿನ ಬುಡಕಟ್ಟು ಸಮುದಾಯಗಳ ಅನನ್ಯತೆ ಎಂದು ಹೇಳುವುದು, ಕೊರಗ ಸಮುದಾಯವು ಅಜಲು (ಮೇಲು ಜಾತಿಗಳ ಕೂದಲು ಉಗುರನ್ನು ಕೊರಗರು ಅವರ ಊಟದ ಎಂಜಲಲ್ಲಿ ಬೆರೆಸಿ ತಿಂದರೆ ಮೇಲು ಜಾತಿಗಳ ರೋಗ ಗುಣವಾಗುತ್ತದೆ ಎಂಬ ನಂಬಿಕೆ) ಪದ್ದತಿ ಅವರ ಗುರುತು ಅದನ್ನವರು ಉಳಿಸಿಕೊಳ್ಳಬೇಕು ಎಂಬಂತಹ ಜಾನಪದ ಅಧ್ಯಯನ ಅಮಾನವೀಯ ಅಧ್ಯಯನವೇ ಸರಿ.
ಹೀಗೆ ಒಂದು ಸಮುದಾಯವನ್ನು ಹಿಡಿತದಲ್ಲಿಟ್ಟುಕೊಳ್ಳಲು, ಅಂಧಕಾರದಲ್ಲಿರಲು, ಅಜ್ಞಾನದ ಕೂಪದಲ್ಲಿರಿಸಲು ಮೇಲು ಜಾತಿಗಳು ಕೆಳ ಸಮುದಾಯಗಳಿಗೆ ಇಂತಹ ಎಷ್ಟೋ ಗುರುತುಗಳನ್ನು ಆರೋಪಿಸಿವೆ. ಇಂತಹ ಗುರುತುಗಳೇ ನಮ್ಮ ಸಮುದಾಯದ ಅನನ್ಯತೆ ಎಂದು ನಂಬಿ ಎಷ್ಟೋ ಸಮುದಾಯಗಳು ಅವುಗಳನ್ನು ಈಗಲೂ ಆರಾಧಿಸುತ್ತಿವೆ. ಇಂತಹ ಆರಾಧನೆಯನ್ನೆ ಜಾನಪದ ಸಂಸ್ಕೃತಿ ಎಂದು ಅಧ್ಯಯನ ಮಾಡಿದ್ದೂ ಆಗಿದೆ. ಆದರೆ ನಿಜವಾದ ಜಾನಪದ ಅಧ್ಯಯನಕಾರರು ಮಾಡಬೇಕಾದುದು ಒಂದು ಸಮುದಾಯದ ಗುರುತು ಸ್ವತಃ ಆಯಾ ಸಮುದಾಯ ಕಟ್ಟಿಕೊಂಡದ್ದೇ? ಅಥವಾ ಆ ಗುರುತನ್ನು ಯಾರು ಯಾಕಾಗಿ ಹೇರಿದರು? ಇಂತಹ ಗುರುತಿನ ಆಚರಣೆಯಿಂದ ಆ ಸಮುದಾಯದ ಹೊಸ ತಲೆಮಾರಿನ ಮೇಲೆ ಆಗುತ್ತಿರುವ ಪರಿಣಾಮವಾದರೂ ಏನು? ಇದು ನಿಮ್ಮ ಗುರುತಲ್ಲ ಬೇರೆಯವರು ಕಟ್ಟಿದ್ದು ಇದನ್ನು ಬಿಟ್ಟುಬಿಡಿ ಎಂದು ಸಮುದಾಯವನ್ನು ಜಾಗ್ರತೆಗೊಳಿಸುವ ವಿಧಾನ ಯಾವುದು ಎನ್ನುವುದನ್ನು ಇಂದು ಅಧ್ಯಯನಕಾರರು ಕಂಡುಕೊಳ್ಳುವ ಅಗತ್ಯವಿದೆ.
ಇಂದು ಮೂಢನಂಬಿಕೆ ವಿಧೇಯಕದ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಹೊತ್ತಿನಲ್ಲಿ ಸಮುದಾಯಗಳ ಅನನ್ಯತೆಯನ್ನು ಹುಟ್ಟುಹಾಕಿದವರು ಈ ವಿಧೇಯಕ ಬರದಂತೆ ತಡೆಯುವ ಹುನ್ನಾರಗಳನ್ನು ಮಾಡುತ್ತಿದ್ದಾರೆ. ಇದು ಕೂಡ ಅನನ್ಯತೆ ಮತ್ತು ಕಲ್ಪಿತ ಅನನ್ಯತೆಯ ಚರ್ಚೆಯೇ ಆಗಿದೆ. ಕೆಲವು ಮೂಢ ನಂಬಿಕೆಗಳನ್ನು ಜಾನಪದ ಅಧ್ಯಯನಕಾರರು ಅಸೂಕ್ಷ್ಮವಾಗಿ ಜನಪದ ಸಂಸ್ಕೃತಿ ಎಂದು ಅಧ್ಯಯನ ಮಾಡಿದ್ದಾರೆ. ಈ ಅಧ್ಯಯನಗಳು ಮೂಢನಂಬಿಕೆ ವಿಧೇಯಕವನ್ನು ವಿರೋಧಿಸುವವರಿಗೆ ಬೆಂಬಲವಾಗಿ ನಿಲ್ಲುವ ಸಾಧ್ಯತೆಗಳಿವೆ. ಇಂದು ಯಾವುವು ಸಮುದಾಯಗಳ ವಿಶಿಷ್ಟತೆಗಳೆಂದು ಗುರುತಿಸುತ್ತೇವೆಯೋ ಆ ವಿಶಿಷ್ಟತೆಗಳು ಸಮುದಾಯದ ಮೇಲ್ಚಲನೆಗೆ ಪ್ರೇರಕವಾಗಿದ್ದರೆ, ಸಮುದಾಯದ ಅಂತಸತ್ವವನ್ನು, ಚೈತನ್ಯವನ್ನು ಹೆಚ್ಚಿಸುವಂತಿದ್ದರೆ ಅವುಗಳನ್ನು ಉಳಿಸಿಕೊಳ್ಳಬೇಕಿದೆ.
ಇಂತಹ ಅನನ್ಯತೆಗಳು ಬಹುಪಾಲು ಹೊಸಕಾಲದ ಸಂದರ್ಭದಲ್ಲಿ ಸಮುದಾಯಗಳೆ ಕಟ್ಟಿಕೊಂಡಿರುವಂತವು. ಉದಾ: ಕೊರಗ ಸಮುದಾಯವು ಪ್ರತಿ ವರ್ಷ ಆಗಷ್ಟ್ ೧೮ ನೇ ತಾರೀಕಿನ ದಿನ ‘ಭೂಮಿಹಬ್ಬ ಎಂಬ ಹೊಸ ಆಚರಣೆಯೊಂದನ್ನು ಮಾಡುತ್ತಿದೆ. ಈ ಆಚರಣೆ ಕನಿಷ್ಟ ಏಳೆಂಟು ವರ್ಷದಿಂದಲೂ ನಡೆಯುತ್ತಿದೆ. ಈ ಹಬ್ಬ ಹುಟ್ಟಿಕೊಂಡದ್ದು ಕೊರಗರು ಭೂಮಿಗಾಗಿ ಹೋರಾಟ ಮಾಡಿ, ಆಗಷ್ಟ್ ೧೮ರ ದಿನ ಸರಕಾರದಿಂದ ಭೂಮಿಯ ಹಕ್ಕು ಪತ್ರಗಳನ್ನು ಪಡೆದಿದ್ದಾರೆ. ಅಂದರೆ ತಮ್ಮ ಹಕ್ಕಿಗಾಗಿ ಹೋರಾಟ ಮಾಡಿ ಗೆದ್ದ ದಿನವನ್ನು ಭೂಮಿಹಬ್ಬ ಎಂದು ಆಚರಿಸುತ್ತಾರೆ. ಈ ಹಬ್ಬದ ಆಚರಣೆ ಈ ಸಮುದಾಯದಲ್ಲಿ ಒಂದು ಬಗೆಯ ಹೋರಾಟದ ನೆನಪನ್ನು ಮತ್ತೆ ಮತ್ತೆ ಪುನರಾವರ್ತಿಸುತ್ತಿದೆ. ಅಂತೆಯೇ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಬೇಕಾದ ಪ್ರಜ್ಞೆಯನ್ನು ಸದಾ ಕಾಪಿಡುತ್ತದೆ. ಇಂದು ದಲಿತ ಸಮುದಾಯಗಳಲ್ಲಿರುವ ಅಂಬೇಡ್ಕರ್ ಪ್ರಜ್ಞೆಯಾಗಲಿ, ಬುದ್ಧ ಪ್ರಜ್ಞೆಯಾಗಲಿ ಇರುವುದು ದಲಿತ ಸಮುದಾಯ ಕಟ್ಟಿಕೊಂಡ ಎಚ್ಚರದ ಸಂಖೇತದ ಹೊಸ ಅನನ್ಯತೆಯೇ ಆಗಿದೆ. ಈ ನೆಲೆಯಲ್ಲಿ ನಾವಿಂದು ಕುರುಡು ಅನನ್ಯತೆಗಳ ಮೂಢ ನಂಬಿಕೆಗಳನ್ನು ಗುರುತಿಸಬೇಕಿದೆ, ಅಂತೆಯೇ ಸಮುದಾಯಗಳು ಕಟ್ಟಿಕೊಂಡ ಹೊಸ ಅನನ್ಯತೆಗಳನ್ನು ಶೋಧಿಸಬೇಕಿದೆ.
ಕನ್ನಡದಲ್ಲಿ ಕಲ್ಪಿತ ಅನನ್ಯತೆಯ ಕುರಿತು ಅಲ್ಲಲ್ಲಿ ಸಂಶಯಗಳು ವ್ಯಕ್ತವಾಗಿವೆ, ಆದರೆ ಅದುವೇ ಅನನ್ಯತೆಯನ್ನು ಗುರುತಿಸುವ ಆಲೋಚನೆಯನ್ನು ಪ್ರಭಾವಿಸಲು ಸಾಧ್ಯವಾಗಿಲ್ಲ. ಮೊಗಳ್ಳಿ ಗಣೇಶ್ ಅವರು ಈ ಬಗೆಯ ಕಲ್ಪಿತ ಅನನ್ಯತೆ ಕುರಿತು ಗಂಬಿsರವಾಗಿ ಪ್ರತಿಕ್ರಿಯಿಸುತ್ತಾರೆ: ಸಾಂಸ್ಕೃತಿಕ ಅನನ್ಯತೆ ಬಗ್ಗೆ ಅನೇಕರು ಸಾಂಪ್ರದಾಯಿಕವಾಗಿ ಧಾರ್ಮಿಕ ಪರಿಭಾಷೆಯಲ್ಲಿ ಚರ್ಚಿಸುತ್ತಿರುತ್ತಾರೆ. ಸಾಂಸ್ಕೃತಿಕ ಚಹರೆಯಿಂದ ಅನನ್ಯತೆಯಿಂದ ಆಯಾ ಸಮುದಾಯಗಳ ವಿಶಿಷ್ಟತೆಯನ್ನು ಗುರುತಿಸುವುದನ್ನು ಪ್ರeವಂತರೂ ಕೂಡ ಮಾಡುತ್ತಿರುತ್ತಾರೆ. ಸಾಂಸ್ಕೃತಿಕ ಅನನ್ಯತೆಯಿಂದಲೇ ಅವರವರ ಪರಂಪರೆ ಕವಲೊಡೆಯುತ್ತದೆ ಎಂತಲೂ ವಾದಿಸುತ್ತಿರುತ್ತಾರೆ. ಇಂತಹ ವಾದಗಳೆಲ್ಲ ಕನಿಷ್ಠ ಸಾಮಾನ್ಯ ತಿಳುವಳಿಕೆ ಇದ್ದರೆ ಸಾಕು ಬಹಳ ಅಪದ್ಧ ಎಂದು ತಿಳಿಯುತ್ತದೆ. ಸಾಂಸ್ಕೃತಿಕ ಅನನ್ಯತೆಯನ್ನು ಇಪ್ಪತ್ತನೆಯ ಶತಮಾನವು ಗಾಢವಾಗಿ ಬದಲಿಸಿದೆ. ಪರಂಪರೆಗಳನ್ನು ಆಧುನೀಕರಣಕ್ಕೆ ಅಳವಡಿಸಿದೆ. ಒಂದೊಂದು ಜಾತಿಗೂ ಒಂದೊಂದು ಅನನ್ಯತೆ ಜಾತಿಪ್ರಣೀತ ಸಮಾಜದಲ್ಲಿದೆ ಎಂಬುದು ಮೇಲುನೋಟಕ್ಕೆ ತಿಳಿಯುತ್ತದೆ.
ಇಲ್ಲಿ ಸಾಂಸ್ಕೃತಿಕ ಚಹರೆ, ಗುರುತು, ವಿಶಿಷ್ಟತೆ ಅನನ್ಯತೆ ಎಂಬ ಪದ ಪ್ರಯೋಗಗಳ ಹಿಂದಿನ ಮನೋಧರ್ಮವನ್ನು ಇರುವ ಅರ್ಥಗಳನ್ನು ಪ್ರಶ್ನಿಸಬೇಕಾಗುತ್ತದೆ. ವೈದಿಕ ಸಮುದಾಯಗಳಿಗೆ ಅನ್ವಯಿಸಿ ಈ ಚಹರೆ, ಗುರುತು, ಅನನ್ಯತೆ, ವಿಶಿಷ್ಟತೆಗಳನ್ನು ಬಹಳ ಸಂತೋಷದಿಂದ ಹೇಳಬಹುದಾದರೂ ಅದೇ ಶಬ್ದಗಳನ್ನು ಅವುಗಳ ಅರ್ಥ ವಿಸ್ತಾರಗಳನ್ನು ಕೆಳಜಾತಿಗಳಿಗೆ ಹೇಳಲು ಮುಜುಗರವೂ, ಬೇಸರವೂ ಎದುರಾಗುತ್ತದೆ ಎಂಬುದನ್ನು ಅನೇಕರು eಪಿಸಿಕೊಳ್ಳಬೇಕು. ೨೦ನೇ ಶತಮಾನದ ಸಾಂಸ್ಕೃತಿಕ ಚಹರೆಯೇ ದಲಿತ ಸಮುದಾಯಗಳಿಗೆ ಬೇರೆಯಾಗಿರುತ್ತದೆ. ಮೆಟ್ಟು ಹೊಲೆಯುವುದು ಅಜಲು ಜೀತಪದ್ಧತಿಗೆ ಒಳಗಾಗುವುದು, ದೇವದಾಸಿಯಾಗು ವುದು, ಮುಂತಾದ ವಿಶಿಷ್ಟ ಅನನ್ಯ ಪದ್ಧತಿಗಳನ್ನು ಆ ಸಮುದಾಯದ ಚಹರೆ ಎಂದು ಹೇಳಿದರೆ ಅದು ಯಾವ ನ್ಯಾಯವಾಗುತ್ತದೆ? ವೈದಿಕ ಪರಂಪರೆ ಹೇರಿದ ಅನಿಷ್ಟ ಪದ್ಧತಿಗಳನ್ನು ಇವತ್ತು ಎಷ್ಟು ಮುಗ್ಧ ದಲಿತ ಸಮುದಾಯಗಳು ಒಪ್ಪಿಕೊಂಡಿವೆ. ಇಂತಹ ಸಂದರ್ಭದಲ್ಲಿ ಸಾಂಸ್ಕೃತಿಕ ಅನನ್ಯತೆ, ಚಹರೆ, ಎಂಬ ಪರಿಕಲ್ಪನೆಗಳೇ ಬಲಪಂಥೀಯ ಧೋರಣೆಗೆ ಪೂರಕವಾಗಿವೆ. ಪ್ರತಿಷ್ಠಿತ ಪ್ರಭುತ್ವ ವ್ಯವಸ್ಥೆಯನ್ನು, ಧಾರ್ಮಿಕ ಅಂಧತ್ವವನ್ನು, ನಾಗರಿಕ ವಿಕೃತಿಯನ್ನು, ಮೂಲಭೂತ ವಾಗಿ ಬದಲಾಯಿಸುವ ಆಶಯದಲ್ಲಿ ತೊಡಗುವ ವೈಚಾರಿಕ ಆದರ್ಶವೇ ಇವತ್ತಿನ ಅನೇಕ ಕೆಳಜಾತಿಗಳ ಸಾಂಸ್ಕೃತಿಕ ಅನನ್ಯತೆಯಾಗಿದೆ. (ಮೊಗಳ್ಳಿ ಗಣೇಶ್, ಮೌಖಿಕ ಕಥನ,ಪುಟ:೪೫) ಈ ನೆಲೆಯಲ್ಲಿ ಈ ಹೊತ್ತು ಅನನ್ಯತೆ ಕುರಿತು ಚಿಂತಿಸುವವರು ಸಮುದಾಯಗಳ ಚಹರೆಯನ್ನು ಪುನರ್ ವ್ಯಾಖ್ಯಾನಕ್ಕೆ ಒಳಗು ಮಾಡಬೇಕಾಗಿದೆ. ಸಮುದಾಯಗಳು ಕಟ್ಟಿಕೊಳ್ಳಬೇಕಾದ ಹೊಸ ಅನನ್ಯತೆಗಳ ಪರ್ಯಾಯವನ್ನು ಸೂಚಿಸಬೇಕಾಗಿದೆ.
ಹೊಸ ಬಗೆಯ ವೈಚಾರಿಕ ಎಚ್ಚರಗಳು ಇಂದು ಸಮುದಾಯಗಳು ಕಟ್ಟಿಕೊಳ್ಳ ಬಹುದಾದ ನವ ಅನನ್ಯತೆಯಾಗಿದೆ ಎನ್ನುವುದು ಸಹ ಜನರ ಪ್ರeಯ ಭಾಗವಾಗುವಂತೆ ಇಂದು ಜಾನಪದ ಅಧ್ಯಯನಗಳು ರೂಪುಗೊಳ್ಳಬೇಕಿದೆ. ಇನ್ನು ಸಮುದಾಯಗಳೇ ತಾವಾಗಿ ಕಟ್ಟಿಕೊಳ್ಳುತ್ತಿರುವ ಹೊಸ ಬಗೆಯ ಅನನ್ಯತೆಯನ್ನು ಗುರುತಿಸುವಿಕೆಯೂ ಸಹ ಈ ಹೊತ್ತಿನ ಎಚ್ಚರದ ಭಾಗವಾಗಬೇಕು. ಹೀಗೆ ಕಲ್ಪಿತ ಅನನ್ಯತೆಯನ್ನು ಕುರಿತು ಬಿsನ್ನವಾಗಿ ಚರ್ಚಿಸಲು ಸಾಧ್ಯವಿದೆ. ಅಂತೆಯೇ ಕನ್ನಡದ ಬಹುಪಾಲು ಜಾನಪದ ಅಧ್ಯಯನಗಳಲ್ಲಿ ಈ ಬಗೆಯ ಕಲ್ಪಿತ ಅನನ್ಯತೆಗಳನ್ನೇ ನಿಜದ ಅನನ್ಯತೆ, ಅದು ಉಳಿಯಬೇಕು ಎನ್ನುವ ನಿರ್ವಚನಗಳಿವೆ. ಅಂತಹ ಅಪಾಯಕಾರಿ ವಿಶ್ಲೇಷಣೆಗಳನ್ನು ಗುರುತಿಸಲು ಇಂದು ಸಾಧ್ಯವಾಗಬೇಕು. ಇಂತಹ ಕೆಲವು ಸೂಕ್ಷ್ಮ ಚರ್ಚೆಗಳನ್ನು ಹೆಚ್ಚು ಬೆಳೆಸಬೇಕಾಗಿದೆ.
ಕೆಲವೊಮ್ಮೆ ಕಲ್ಪಿತ ಅನನ್ಯತೆಗಳ ಹಿಂದೆಯೂ ಭಾವನಾತ್ಮಕವಾಗಿ ಒಂದಾಗುವುದಕ್ಕಿಂತ ರಾಜಕೀಯ ಅಧಿಕಾರದ ಪ್ರಶ್ನೆಯೂ ಇರುತ್ತದೆ. ರಾಜಕೀಯ ಅಧಿಕಾರ, ಸಾಮಾಜಿಕ ನ್ಯಾಯದ ಹಕ್ಕಿನ ಪ್ರತಿಪಾದನೆಯಾಗಿಯೂ ಸಾಂಸ್ಕೃತಿಕ ಅನನ್ಯತೆಯ ಅಧ್ಯಯನಗಳು ಇಂದು ಹೆಚ್ಚಾಗಿ ನಡೆಯುತ್ತಿರುವುದಕ್ಕೆ ಕಾರಣವಿರಬೇಕು. ದಮನಿತ ಸಮುದಾಯಗಳ ಸಾಂಸ್ಕೃತಿಕ ವಿಶಿಷ್ಟತೆಯ ಅಧ್ಯಯನಗಳಿಗೆ ಯಾವಾಗಲೂ ಸಾಮಾಜಿಕ ರಾಜಕೀಯ ಹಕ್ಕುಸಾಧನೆಯ ಆಯಾಮವಿರುತ್ತದೆ. ಅವಕ್ಕೆ ಅಲ್ಪಸಂಖ್ಯಾತರಾಗಿರುವ ಕಾರಣಕ್ಕೆ ಹುಟ್ಟುವ ಅಭದ್ರತೆಯ ಭಯಕ್ಕಿಂತ, ಸವರ್ಣೀಯ ಸಮಾಜದಲ್ಲಿ ಆತ್ಮಾಭಿಮಾನ ಕಳೆದುಹೋಗದಂತೆ ಉಳಿಸಿಕೊಳ್ಳುವ ಒತ್ತಡವಿರುತ್ತದೆ (ರಹಮತ್ ತರೀಕೆರೆ:ಪ್ರತಿಸಂಸ್ಕೃತಿ:ಪುಟ:೨೦೯) ಎಂದು ತರೀಕೆರೆ ಅವರು ವಿಶ್ಲೇಷಿಸುತ್ತಾರೆ.
ಸಾಂಸ್ಕೃತಿಕ ಅನನ್ಯತೆಯ ಪ್ರಶ್ನೆಯನ್ನು ತಾತ್ವಿಕವಾಗಿ ನಿರಾಕರಿಸುವ ಒಂದು ಶಾಖೆಯಿದೆ. ಅದು ಚರಿತ್ರೆ, ಸಮಾಜಶಾಸ್ತ್ರ, ಕಲೆಗಳ ಅಧ್ಯಯನ ಕುರಿತದ್ದು. ಅದನ್ನು ಸಾಂಸ್ಕೃತಿಕ ಸಂಕರವಾದಿ ಎಂದು ಕರೆಯಬಹುದು. ಈ ಶಾಖೆಯ ಪ್ರಕಾರ, ಭಾರತದ ಚಾರಿತ್ರಿಕ ಬೆಳವಣಿಗೆಗಳಲ್ಲಿ ಜನಾಂಗ ವಲಸೆಗಳು ಹೊರಗಿನಿಂದ ರಾಜ್ಯ ವಿಸ್ತರಣೆಗೆ ಬಂದ ವಿದೇಶಿ ಆಳು ವರ್ಗದವರು(ಹೂಣರು, ಶಕರು, ಮಂಗೋಲರು, ಗ್ರೀಕರು, ತುರ್ಕರು, ಬ್ರಿಟಿಷರು) ಬಂದು ನೆಲೆಸಿದರು. ಆ ಹೊತ್ತಲ್ಲಿ ಭಾರತದಲ್ಲಿಯೇ ಇರುವ ವಿವಿಧ ಜಾತಿ, ಧರ್ಮಗಳು ತಮ್ಮ ಬದುಕಿನಲ್ಲಿ ಅನೇಕ ಬದಲಾವಣೆ ತಂದುಕೊಂಡವು. ಧರ್ಮ ಬದಲಾಯಿಸಿದವು. ಹೊಸ ದೈವಗಳನ್ನು ಪಡೆದವು. ಈ ಕಾರಣಗಳಿಂದ ನಮ್ಮಲ್ಲಿ ಸಮುದಾಯಗಳಿಗೂ ಧರ್ಮಗಳಿಗೂ ಸಮಾಜಗಳಿಗೂ ಅವುಗಳದ್ದೇ ಆದ ಸಾಂಸ್ಕೃತಿಕ ವಿಶಿಷ್ಟತೆ ಇದೆ. ಆದರೆ ಅದು ಯಾರಿಂದಲೂ ಪ್ರಭಾವಗೊಳ್ಳದ ಮೂಲರೂಪದ ಅನನ್ಯತೆ ಅಲ್ಲ. ಅಂತಹದು ಇರಲು ಸಾಧ್ಯವೂ ಇಲ್ಲ ಎಂದು ಈ ಚಿಂತನೆ ಭಾವಿಸುತ್ತದೆ.
ಈ ಹಿನ್ನೆಲೆಯಲ್ಲಿ ವಿಶ್ಲೇಷಣೆ ಮಾಡುವವರಲ್ಲಿ ಡಿ.ಡಿ.ಕೊಸಾಂಬಿ, ದೇವಿ ಪ್ರಸಾದ್ ಚಟ್ಟೋಪಾಧ್ಯಾಯ, ರೋಮಿಲಾ ಥಾಪರ್ ಮುಖ್ಯರು, ಕನ್ನಡದಲ್ಲಿ ಶಿವರಾಮ ಕಾರಂತರ ಸಂಸ್ಕೃತಿ ಚಿಂತನೆಗಳಲ್ಲಿ ಈ ಪ್ರತಿಪಾದನೆ ಮತ್ತೆ ಮತ್ತೆ ಬರುತ್ತದೆ. ಶಂಬಾ ಜೋಶಿಯವರ ಪ್ರಮುಖ ಸಾಂಸ್ಕೃತಿಕ ಅಧ್ಯಯನಗಳೂ ಈ ಹುಡುಕಾಟ ಮಾಡುತ್ತವೆ. ಡಿ.ಆರ್.ನಾಗರಾಜ ಅವರ ಅಧ್ಯಯನಗಳಲ್ಲಿ ಮುಖ್ಯ ಹುಡುಕಾಟವು ಭಾರತದ ಶಿಷ್ಟ, ಪರಿಶಿಷ್ಟ, ದ್ರಾವಿಡ-ಆರ್ಯ, ನಗರ-ಗ್ರಾಮೀಣ, ಜನಪದ-ನಾಗರಿಕ, ಹಿಂದೂ-ಮುಸ್ಲಿಂ, ದಲಿತ-ಬ್ರಾಹ್ಮಣ ಮುಂತಾದ ದ್ವಂದ್ವಾತ್ಮಕ ಲೋಕಗಳ ಆಚೆ ನಡೆದಿರುವ ಸಾಂಸ್ಕೃತಿಕ ಕೊಡುಕೊಳೆಗಳನ್ನು ಕುರಿತುದಾಗಿತ್ತು. ಅಲ್ಲಮ ಪ್ರಭು ಮತ್ತು ಶೈವಪ್ರತಿಭೆ ಇದಕ್ಕೆ ನಿದರ್ಶನ. ರಹಮತ್ ತರೀಕೆರೆ ಅವರ ಪ್ರತಿಸಂಸ್ಕೃತಿಯ ಚಿಂತನೆಯಲ್ಲಿಯೂ ಈ ಬಗೆಯ ಹುಡುಕಾಟವಿದೆ. ಇಲ್ಲಿ ಸಾಂಸ್ಕೃತಿಕ ಅನನ್ಯತೆಯನ್ನು ಕಲ್ಪಿತವೆಂದು ನಿರಾಕರಿಸಿದ ಧೋರಣೆಯ ಜತೆ ಅನುಮಾನಿಸಿ ನೋಡುವ ಸೂಕ್ಷ್ಮತೆಯೂ ಇದೆ. ಹೀಗೆ ಅನನ್ಯತೆಯನ್ನು ಕಲ್ಪಿತವೆಂದು ನಿರಾಕರಿಸುವ ಅಥವಾ ಅನನ್ಯತೆಯನ್ನೇ ಭಿನ್ನವಾಗಿ ಅರ್ಥೈಸುವ ಆಲೋಚನೆಗಳು ಕನ್ನಡ ಸಂದರ್ಭದಲ್ಲಿ ಜಾನಪದ ಅಧ್ಯಯನಗಳಿಗಿಂತ, ಸಾಹಿತ್ಯ ವಿಮರ್ಶೆ ಮತ್ತು ಸಾಂಸ್ಕೃತಿಕ ಅಧ್ಯಯನಗಳಲ್ಲಿ ಹೆಚ್ಚಾಗಿದೆ.
ಅನನ್ಯತೆ ಎನ್ನುವುದು ಸಮುದಾಯಗಳಿಗೆ ಸ್ವಾಭಿಮಾನವನ್ನೂ, ತನ್ನದೇ ಆದ ವಿಶಿಷ್ಟತೆಯ ಕಾರಣಕ್ಕೆ ಒಂದು ಬಗೆಯ ಶಕ್ತಿಯನ್ನು ಕೊಡುವಂತಿದ್ದರೂ, ಅದೇ ಅನನ್ಯತೆ ಆಯಾ ಸಮುದಾಯಗಳಿಗೆ ಬಂಧನವಾಗುವ ಅಪಾಯವೂ ಇಲ್ಲದಿಲ್ಲ. ಬದಲಾದ ಸಮಾಜದಲ್ಲಿ ಬದುಕು ಕಟ್ಟಿಕೊಳ್ಳಲು ಸಮುದಾಯಗಳು ತಮ್ಮ ಅನನ್ಯತೆಗಳನ್ನು ಕಿತ್ತೊಗೆದು ಹೊಸ ಅನನ್ಯತೆಯನ್ನು ಕಟ್ಟಿಕೊಳ್ಳುವಿಕೆ ನಿರಂತರವಾಗಿ ನಡೆದೇ ಇದೆ. ಹಾಗಾಗಿಯೇ ಸಮುದಾಯಗಳು ತಮ್ಮ ಮೂಲ ವೃತ್ತಿ ಕಸುಬುಗಳನ್ನು ಬಿಟ್ಟು ಬೇರೆ ಬೇರೆ ವೃತ್ತಿಕಸಬುಗಳಿಗೆ ಪಲ್ಲಟವಾಗಿರುವುದನ್ನು ನಾವು ನೋಡುತ್ತಿದ್ದೇವೆ. ಈ ನೆಲೆಯಲ್ಲಿ ದಲಿತರ ಕೆಳಜಾತಿಗಳ ದೊಡ್ಡ ಚಲನೆಯನ್ನು ನಾವು ಗಮನಿಸಬಹುದು.
ದಲಿತರು ಬದುಕುವ ರೀತಿಯೇ ಒಂದು ಅನನ್ಯತೆ. ಅದನ್ನವರು ಮುಂದುವರಿಸಿಕೊಂಡು ಹೋಗಬೇಕು ಎಂಬ ಮೂಡನಂಬಿಕೆಗೆ ಅಂಬೇಡ್ಕರ್ ಬಲಿಯಾಗಿದ್ದರೆ ಇಂದು ದಲಿತ ಕೆಳಜಾತಿಗಳ ಸ್ಥಿತಿ ಹೇಗಿರುತ್ತಿತ್ತು ಎಂದು ನೆನಪಿಸಿಕೊಂಡರೂ ಮೈ ನಡುಗುತ್ತದೆ. ಹಾಗಾಗಿಯೇ ಅಂಬೇಡ್ಕರ್ ಅವರು ದಲಿತ ಕೆಳಜಾತಿಗಳಿಗೆ ಶಿಕ್ಷಣ ಸಂಘಟನೆ ಹೋರಾಟದಂತಹ ಹೊಸ ಅನನ್ಯತೆಗಳನ್ನು ತೋರಿದರು. ಹೀಗೆ ಪರಂಪರೆಯಿಂದ ಬಂದ ಅನನ್ಯತೆಗಳನ್ನು ಸಾದಾ ಎಚ್ಚರದಿಂದ ನೋಡಬೇಕಾಗಿದೆ. ಇವುಗಳು ಯಾರೋ ಕಲ್ಪಿಸಿದ ಅನನ್ಯತೆಯ ಕವಚಗಳಾಗಿಯೂ ನಮ್ಮನ್ನು ನಿಯಂತ್ರಿಸುತ್ತಿರುತ್ತವೆ. ಸಾಂಪ್ರದಾಯಿಕ ಅನನ್ಯತೆಗಳಿಗಿಂತ, ಸಮುದಾಯಗಳನ್ನು ಒಗ್ಗೂಡಿಸುವ ಹೊಸ ಅನನ್ಯತೆಗಳ ಹುಡುಕಾಟವನ್ನೂ ನಾವಿಂದು ಮಾಡಬೇಕಿದೆ. ಅಂಬೇಡ್ಕರ್ ಅವರ ಒಂದು ಚಿತ್ರ, ಒಂದು ಪ್ರತಿಮೆ, ಒಂದು ಮಾತು ಇಡೀ ದಲಿತ ಕೆಳ ಸಮುದಾಯಗಳನ್ನು ಒಂದುಗೂಡಿಸುವ ಚುಂಬಕ ಶಕ್ತಿಯಾಗಿರುವುದನ್ನು ನೋಡಿದರೆ ಸ್ವತಃ ಅಂಬೇಡ್ಕರ್ ದಲಿತ ಕೆಳಜಾತಿಗಳಿಗೆ ಹೊಸ ಅನನ್ಯತೆಯ ಸಂಕೇತವಾಗಿರುವುದನ್ನು ನೋಡಬಹುದಾಗಿದೆ. ಹೀಗೆ ಕಲ್ಪಿತ ಅನನ್ಯತೆಗಳನ್ನು ಒಡೆಯುತ್ತಾ ಹೊಸ ವೈಚಾರಿಕ ಅನನ್ಯತೆಗಳನ್ನು ಹುಡುಗುವ ಅಧ್ಯಯನಗಳು ಇಂದು ಹೆಚ್ಚಾಗಿ ನಡೆಯಬೇಕಿದೆ.

ಹಟ್ಟಿಯ ಒಳವಿನ್ಯಾಸದಲ್ಲಿ ಎದುರು ಭಾಗವನ್ನು ‘ಮುಂದಣೆ’ ಎಂತಲೂ ಹಿಂಭಾಗವನ್ನು ‘ಹಿಂದಣೆ’ ಎಂತಲೂ ಕರೆಯುವುದು ವಾಡಿಕೆ. ಮುಂದಣೆಯಲ್ಲಿ ಕಟ್ಟುವುದಕ್ಕೆ ಯೋಗ್ಯವಾದ ದಳಕಟ್ಟು, ಅಕ್ಕಚ್ಚ್ಟು-ಬಾಯರು ಕುಡಿಯಲು ಬಾಣಿ/ಮರ್ಗಿ ಇವುಗಳ ಸಹಿತ ಆ ಹಟ್ಟಿಯ ಮಟ್ಟಿಗೆ ಅದು ವಿಐಪಿ ಸ್ಟ್ಯಾಂಡ್ ತರಹ ಇರುತ್ತದೆ. ‘ಹಿಂದಣೆ’ ಹೆಸರೇ ಹೇಳುವಂತೆ ಮುಖ್ಯ ಜಾನುವಾರುಗಳ ಬೆನ್ನಿಗೆ ಸಿಕ್ಕಜಾಗದಲ್ಲಿ ಮಲಗುವುದಕ್ಕೆ ಇರುವ ಅವಕಾಶ. ಈ ಅವಕಾಶದಲ್ಲಿ ಕೆಲವೊಮ್ಮೆ ಮುಂದಿನ ಹಸು ಹಿಂದಕ್ಕೆ ಬಂದು ಹಾಕಿದ ಸಗಣಿಯೂ ಇರಬಹುದು. ಇಲ್ಲವೇ ಹುಲ್ಲು ತಿನ್ನುವಾಗಲೆ (ಹೆಣ್ಣು ಹಸುವಾದರೆ) ಹಿಂದಕ್ಕೆ ಚಿಮ್ಮಿಸಿ ಬಿಡುವ ಉಚ್ಚೆಯೂ ಇರಬಹುದು. ಒಟ್ಟಾರೆ ಹಿಂದಣೆ ಎಂದರೆ ನಮ್ಮ ಸಮಾಜದಲ್ಲಿ ದಲಿತರ ಜಾಗ ಇದ್ದಂತೆ. ನಗರದಲ್ಲಿ ಕೊಳೆಗೇರಿ ಇದ್ದಂತೆ. ಇಕ್ಕಟ್ಟಿನಲ್ಲಿಯೇ ಸಿಕ್ಕಿದ್ದನ್ನು ತಿಂದು ಬದುಕಬೇಕು. ಮುಂದಣೆಯಲ್ಲಿ ಕಟ್ಟಲು ಜಾಗವಿಲ್ಲದೆ ಹೋದಾಗ ಮಿಕ್ಕವುಗಳಿಗೆ ಇಲ್ಲಿಯೇ ಜಾಗ ಸಿಕ್ಕಬೇಕು. ಇವುಗಳ ಪರಿಸ್ಥಿತಿಯೆಂದರೆ ತಿನ್ನುವುದರಲ್ಲಿ ಹಿಡಿಯಷ್ಟು ಪಾಲು ಆದರೆ ಅಪಾಯದಲ್ಲಿ ಹಿರಿದಾದ ಪಾಲು. ಯಾರಾದಾದರೂ ಮನೆಯ ಹಗ್ಗಬಿಚ್ಚಿಕೊಂಡ ಬೀಡಾಡಿ ಹಸುಗಳು ಹಟ್ಟಿಗೆ ನುಗ್ಗಿದಲ್ಲಿ ಮೊದಲು ಆಕ್ರಮಣ ಮಾಡುವುದು ಈ ಹಿಂದಣೆಯಲ್ಲಿರುವವುಗಳನ್ನೇ. ಅದಲ್ಲದೆ ಹಟ್ಟಿಗೆ ನುಗ್ಗುವ ಅಪಾಯಕಾರಿ ಪ್ರಾಣಿಗಳು ಮೊದಲು ಎರಗುವುದು ಇವುಗಳ ಮೇಲೆಯೇ. ಇದೊಂದರ್ಥದಲ್ಲಿ ಗಂಟಿಗುರಾಣಿಗಳ ತಾಣ. ಇನ್ನೂ ಒಂದರ್ಥದಲ್ಲಿ ಇದು ಹಟ್ಟಿಯಿಂದ ಹೊರಹಾಕಲೇಬಾಕಾದ ಅನುಪಯುಕ್ತವೆನಿಸಿದವುಗಳ ತಾತ್ಕಾಲಿಕ ತಂಗುದಾಣವೂ ಹೌದು.
ಮಲೆನಾಡು ಗಿಡ್ಡ ಇಲ್ಲವೆ ದೇಸೀ ತಳಿಯ ಕಿರುಗಾತ್ರದ ಅವೇ ಹುಂಡಿ, ಕೆಂಪಿ, ಬುಡ್ಡಿಯಂತಹ ದನಗಳನ್ನು. ವರ್ಷಕ್ಕೊ, ಎರಡು ವರ್ಷಕ್ಕೊ ಕರುಹಾಕುವ ಈ ಹಸುಗಳು, ದಿನಕ್ಕೆ ನಾಲ್ಕೈದು ಸಿದ್ದೆ ಹಾಲು ಕೊಟ್ಟರೆ ಅದೇ ಹೆಚ್ಚು. ಇವು ಹಾಕುವ ಹೆಣ್ಣು ಕರುಗಳನ್ನು ಸಂತಾನವಾಗಿ ಬಳಸಿಕೊಳ್ಳಲು ಸಮಸ್ಯೆಯಿರಲಿಲ್ಲ. ಆದರೆ ಗಂಡುಕರುಗಳು ಮಾವಿನಕಾಯಿ ಗಾತ್ರದವುಗಳೇ ಹೆಚ್ಚಾಗಿರುತ್ತಿದ್ದ ಕಾರಣಕ್ಕಾಗಿ ಉಳುವ ಗುಡ್ಡಗಳನ್ನಾಗಿ ಬಳಸಿಕೊಳ್ಳಲು ಸಾಧ್ಯವಾಗದೆ ಬೆಳೆಯುವ ತನಕ ಕೆಲವೊಂದಿಷ್ಟು ಕಾಲ ಹಿಂದಣೆಯಲ್ಲಿ ಕಟ್ಟಿ, ಅಲ್ಲ್ಲಿಯೇ ಸಗಣಿಯ ಮೇಲೆಯೇ ಹುಲ್ಲುತಳಿದು, ಬಿಟ್ಟು-ಕಟ್ಟಿ ಹೇಗೋ ಅನುಭವಿಸುವಷ್ಟು ಉಪದ್ರವವನ್ನು ಅವುಗಳಿಂದ ಅನುಭವಿಸಿಯಾದ ಮೇಲೆ ಮತ್ತು ಹಿಂದಣೆಯಲ್ಲಿ ಮತ್ತೊಂದನ್ನು ಕಟ್ಟಲೇಬೇಕಾದಾಗ ಇವುಗಳನ್ನು ಸಿಕ್ಕಷ್ಟಕ್ಕೆ ಸಾಗಹಾಕಿ ಯಾವುದಾದರೂ ಒಂದು ಸಣ್ಣ ಖರ್ಚನ್ನು ಸರಿತೂಗಿಸಿಕೊಳ್ಳುತ್ತಿದ್ದುದು ರೂಢಿ. ಕಟ್ಟಿ ಸಾಕಲು ಸಾಧ್ಯವಿಲ್ಲವೆನಿಸಿದಾಗ, ಯಾರು? ಮತ್ತು ಯಾಕೆ? ಕೊಳ್ಳುತ್ತಾರೆ ಎಂಬ ಅರಿವಿದ್ದೂ, ಹಟ್ಟಿಯನ್ನು ವಿಸ್ತರಿಸಲಾರದ, ಮನುಷ್ಯರಂತೆ ಅನುಪಯುಕ್ತ ಮಗುವನ್ನು ಲಿಂಗಪತ್ತೆ ಮಾಡಿ ಭ್ರೂಣಹತ್ಯೆ ಮಾಡುವ ವೈದ್ಯಕೀಯ ರೂಢಿಯೂ ಇರದ ಅವರು ಅವುಗಳನ್ನು ಮಾರಲೇಬೇಕು. ಅವುಗಳು ಎಲ್ಲಿಗೆ ಹೋಗುತ್ತವೆ ಎಂಬ ಅರಿವಿದ್ದೂ ಒಂದೂ ಕಾಸಿಲ್ಲದೆ ಎಲ್ಲಿಗೋ ಹೊಡೆದು ಬರುವುದು ಅವರಿಗೆ ಸಾಧ್ಯವೂ ಇರಲಿಲ್ಲ. ಮಾತ್ರವಲ್ಲ ನನ್ನೂರಿನಲ್ಲಿ ಹಾಗೆ ಹೊಡೆದುಬಂದ ಒಂದೇ ಒಂದು ಉದಾಹರಣೆಯನ್ನು ನಾನು ಕಂಡಿಲ್ಲ. ಆದರೆ ಹಿಂದಣೆಗಳು ಮಾತ್ರ ಹೊಸ ಸದಸ್ಯನಿಗಾಗಿ ಖಾಲಿಯಾಗುತ್ತಿದ್ದುದು ನಿಜ.
ಚರ್ಮದ ಮೇಲೆ ಈ ಹಂತದಲ್ಲಿ ಆಗುವ ಗಾಯಗಳು, ಅವುಗಳ ಮೇಲೆ ಕೂತು ಇಪ್ಪಿ ಹಾಕುವ ನೊಣಗಳನ್ನು ಓಡಿಸಿಕೊಳ್ಳುವಲ್ಲ್ಲಿಯೂ ಸೋಲುವ ಚೋಂಕಾಗಿ(ರೋಮಉದುರಿ) ನಿತ್ರಾಣಗೊಂಡ ಬಾಲ ಹಾಗೂ ಅಲ್ಲಾಡಿಸಲಾರದ ಕಿವಿಗಳಿಂದಾಗಿ ಈ ಗಾಯಗಳಲ್ಲಿ ಹುಳುವಾಗಿ ನೆತ್ತರು ಸೋರುವಂತಾಗುತ್ತದೆ. ಬಯಲು ಹಾಗೂ ತೆರದ ಹಟ್ಟಿಯಲ್ಲಿ ಈ ಗಾಯಗಳ ಮೇಲೆ ದಾಳಿಮಾಡುವ ಕಾಗೆಗಳ ಹಿಂಸೆ ನೋಡಿಕೊಂಡಿರುವುದೇ ಯಾತನಾದಾಯಕ. ಅದೂ ಸಹಿಸಿಕೊಂಡು ಅವುಗಳು ಹಟ್ಟಿಯಲ್ಲಿಯೇ ಉಳಿದವೆಂದರೆ ಹಾಲುಕೊಡುವಾಗ ಕಾಮಧೇನುವಾಗಿದ್ದ ಅದೇ ಹಸು ಅಕ್ಷರಶ: ‘ಕಾಡುವಧೇನು’ ಆಗಲೂಬಹುದು. ಮಲಗಿದಲ್ಲಿಂದ ಏಳಲಾರದ ಅವುಗಳನ್ನು ಎಬ್ಬಿಸುವ ಸಲುವಾಗಿ ಅನಿವಾರ್ಯವಾಗಿ ಬಾಲವನ್ನು ತಿರುವಲಾಗುತ್ತದೆ. ಕೊನೆ ಕೊನೆಗೆ ಹೀಗೆ ತಿರುವುವ ವೇಳೆ ಉಂಟಾಗುವ ಬಾಲದ ವೇದನೆಗೂ ಎದ್ದು ನಿಲ್ಲುವ ತಾಕತ್ತು ಕಳೆದುಕೊಂಡ ಮೇಲೆ ಅವುಗಳ ಶುಶ್ರೂಷೆಗೆ ಕನಿಷ್ಠ 3-4 ಜನ ನಿಲ್ಲಬೇಕಾದ ಸ್ಥಿತಿ ಉಂಟಾಗಬಹುದು. ಎಮ್ಮೆ, ಕೋಣ, ಎತ್ತುಗಳಾದರೆ ಈ ಸ್ಥಿತಿ ಮತ್ತಷ್ಟು ಸಂಕಟದಾಯಕ. ಆದಾಯವೂ ಇಲ್ಲದೆ ಬಂಡವಾಳವನ್ನೂ ಕಳೆದುಕೊಳ್ಳುತ್ತಾ ಅನಾಥಾಶ್ರಮದಂತೆ ಚಾರಿಟಿಯ ಕೆಲಸ ಮಾಡುವ ಸಾಮರ್ಥ್ಯ ಒಬ್ಬ ಸಾಮಾನ್ಯ ರೈತನಿಗೆ ಇರುವುದು ಸಾಧ್ಯವೇ? ಕೈ ಮೈ ನೆಕ್ಕಿದ ಅದೇ ಹಸು ಈಗ ಇಡಿಯ ಮನೆಯನ್ನೇ ನೆಕ್ಕಿನಾಶ ಮಾಡಿದ ಅನುಭವವಾಗುತ್ತದೆ. ದುರಂತವೆಂದರೆ ಈ ಸ್ಥಿತಿಗೆ ತಲುಪಿದ ಹಸುವನ್ನು ಕೊಂದು ಪಾಪಕಟ್ಟಿಕೊಳ್ಳಲಾರದ ಅವರು ಅದು ಸಾಯುವ ತನಕ ಪಡಬಾರದ ಪಾಡುಪಡುತ್ತಾರೆ. ಹಾಗಾಗಿ ಆ ಸ್ಥಿತಿ ಒದಗದಿರಲಿ ಎಂದು ಮುಂಚಿತವಾಗಿಯೇ ಅದನ್ನು ಹಿಂದಣೆಯಲ್ಲಿ ಕಟ್ಟಿ ಹಟ್ಟಿಯಿಂದ ಹೊರಹಾಕಿ ಹಗುರಾಗಲು ಕಾಯುತ್ತಾರೆ.
ಆದರೆ ಆ ಸ್ಥಿತಿ ನಮ್ಮ ಹಟ್ಟಿಯದೇ ಆದಾಗ ನಮಗೆ ಹಾಗೆ ಉಳಿದ ಕೋರಸ್ ಸೇರಿಸುವ ಶಕ್ತಿಯೇ ಇರುತ್ತಿರಲಿಲ್ಲ. ಚಾಲ್ತಿಯಲ್ಲಿರುವ ಈ ಕಥೆಯ ಆಳದಲ್ಲಿರುವುದು ಚಿಕ್ಕಹಿಡುವಳಿದಾರನ ಬಂಡವಾಳದ ಮುಳುಗುವಿಕೆಯಿಂದಾಗುವ ಸಂಸಾರದ ಅನಾಥಸ್ಥಿತಿ. ದುಡಿಮೆಯ ಹತಾರು, ದುಡಿಯುವ ನೆಲ ಕಳೆದುಕೊಳ್ಳುವ ರೈತರಿಗೆ ಒಂದೇ ದಾರಿ ಸಾವು. ಇಂತಹ ಸರಳ ಸತ್ಯಗಳು ಅರ್ಥವಾಗದ ವಾಣಿಜ್ಯೀಕೃತ ಆಸಕ್ತಿಗಳು ಅಭಿವೃದ್ಧಿಯ ಹೆಸರಲ್ಲಿ ರೈತರನ್ನು ಎತ್ತಂಗಡಿ ಮಾಡಿ, ಅವರಿಗೆ ಅವರು ಮಾಡಲಾರದ ಕೆಲಸ/ಉದ್ಯೋಗ ಕೊಡುವ ಮಾತಾಡುತ್ತವೆ. ಹಾಗೆಯೇ ಬಂಡವಾಳ ಹೂತು ಹೋದರೂ ಪರವಾಗಿಲ, ಭಾವನೆಯನ್ನು ಗೌರವಿಸು ಎಂಬ ಶಾಸನ ರೂಪಿಸುವಲ್ಲಿ ಒತ್ತಡ ಹೇರುತ್ತವೆ. ಮೂಲವನ್ನೇ ಕಳೆದುಕೊಳ್ಳುವ ರೈತರು ಮುಂದಿನ ದಿನಗಳಲ್ಲಿ ಮಳೆ ಬರುವುದನ್ನೂ ಎಚ್ಚರಿಸುವ ಭಾಗ್ಯ ಪಡೆಯುವರೆಂಬ ವಿಶ್ವಾಸವಿಲ್ಲ. ಯಾಕೆಂದರೆ ಕನಿಷ್ಠ ಆ ಸಂವೇದನೆಯನ್ನಾದರೂ ದುಡ್ಡು-ಧರ್ಮಗಳ ಅಮಲು ಉಳಿಸಬೇಕಲ್ಲವೇ?


.jpg)
ಸ್ನಾನಕ್ಕಾಗಿ ಇಡುತ್ತಿದ್ದ ನೀರು ಕಾಯಿಸುವ ವ್ಯವಸ್ಥೆಯಲ್ಲವನ್ನೂ ಹೊಂದಿರುತ್ತಿದ್ದ ಹಟ್ಟಿಯಣೆಗಳೇ ನಮ್ಮ ತಾಯಂದಿರು ನಮ್ಮನ್ನು ಭೂಮಿಗೆ ಇಳಿಬಿಡುವ ತಾಣಗಳಾಗಿದ್ದವು. ಹಾಗಾಗಿ ಹುಟ್ಟಿದ ಮಕ್ಕಳನ್ನು ತಂದೆ ಮನೆಯ ಕಡೆಯವರು ನಮ್ಮ ಹಟ್ಟಿಯಣೆಗಳಲ್ಲಿ ಹುಟ್ಟಿದವನಲ್ವಾ? ಎಂದೇ ಸಂಭೋಧಿಸುತ್ತಿದ್ದುದುಂಟು. ಇಂತಹ ಹಟ್ಟಿಯಣೆಗಳಲ್ಲಿ ಹುಟ್ಟುವುದು ಮಾತ್ರವಲ್ಲದೆ ಅದೇ ಕರುಮರಿಗಳ ಜತೆಗೆ ಜನನೋತ್ತರವಾದ ಬಾಲ್ಯವನ್ನು ಕಳೆಯುವ ಬದುಕಿನ ಸುಖವನ್ನು ಕೈತುಂಬ ಚಾಚಿಕೊಂಡೇ ಬೆಳೆದ ಆನಂದ ನನ್ನೊಂದಿಗಿದೆ. ಇದಲ್ಲದೆ ಈ ನಾಲ್ಕು ಕಾಲಿನ ಹಸು-ಕೋಣ-ಎಮ್ಮೆ-ಎತ್ತುಗಳೆಂಬ ಪಶುಲೋಕ ಭಾಷಿಕವಾಗಿಯೂ ನುಡಿಗಟ್ಟು, ಗಾದೆ, ಕಥೆ ಇತ್ಯಾದಿಗಳ ಮೂಲಕವೂ ನನ್ನ ಮಾನಸಿಕ ವಲಯವನ್ನು ಹೊಕ್ಕು ಗಟ್ಟಿಯಾಗಿ ಕುಂತು ಬಿಟ್ಟಿವೆ.
ತಾಯ್ತನದ ಅನುಬಂಧದಲ್ಲಿ ಹಾಲು ಸೂಸುವ ಕಥೆಗಳನ್ನು ಕೇಳಿದವನಿದ್ದೆ. ಹುಟ್ಟಿದಾರಭ್ಯದಿಂದ ತೊಡಗಿ ಆಕ್ಷರಿಕವಲ್ಲದ ಮತ್ತು ಅಕ್ಷರ ಜಗತ್ತಿನ ಪಠ್ಯಗಳೆರಡರ ಮೂಲಕವೂ ನಾನು ಕೇಳಿದ ಬಹುಪಾಲು ಕಥೆಗಳು ಕೈಲೂತಿಯಂತಹ ವರ್ಣ ಶ್ರೇಷ್ಠವೋ, ಗಂಗೆ ಗೌರಿಯರಂತಹ ನಾಮ ಶ್ರೇಷ್ಠವೋ ಆಗಿದ್ದ ಹಸುಗಳಿದ್ದು, ಅಂತಹ ಕಥೆಗಳಲ್ಲಿ ನನ್ನ ಮುದ್ದಿನ ಎಮ್ಮೆಗಳಾಗಲೀ, ಕೋಣಗಳಾಗಲೀ, ಎತ್ತುಗಳಾಗಲೀ, ಕರುಹಡೆಯದ ಒಂದೇ ಕಾರಣಕ್ಕೆ “ಗೊಡ್ಡು”ಗಳೆನಿಸಿಕೊಳ್ಳುತ್ತಿದ್ದ ಬಂಜೆಹಸುಗಳಾಗಲೀ ಇರುತ್ತಿರಲಿಲ್ಲ! ಕಥೆಗಳಲ್ಲಿ ಇರುತ್ತಿದ್ದ ಬಹುಪಾಲು ಹಸುಗಳು ತುಂಬಿದ ಕೆಚ್ಚಲನ್ನು ಹೊತ್ತುಕೊಂಡು ಹಾಲು ಸುರಿಯಲು ತಯಾರಾಗಿಯೇ ನಿಂತವುಗಳು! ಯಾರೂ ಕಾಣದಂತೆಯೇ ಹುತ್ತದ ಮೇಲೆ ಹಾಲು ಸುರಿಯುವ, ಕಾಳಿಂಗನಂತಹ ಗೊಲ್ಲ ಕರೆದ ತಕ್ಷಣ ಬಂದು ಅವನ ತಂಬಿಗೆಯನ್ನು ತುಂಬುವಂತೆ ಚಲ್ಲಿ ಸೂಸಿ ಹಾಲು ಕರೆಯುತ್ತಿದ್ದ ಹಸುಗಳೇ. ಪ್ರಾಯಶಃ ಈ ಹಸುಗಳಿಗಿಂತ, ತಂಬಿಗೆ ತುಂಬುವ ಹಾಲೇ ಅತಿಮುಖ್ಯ ವಸ್ತುವೆನಿಸುತ್ತದೆ. ತುಂಬಿದ ಕೆಚ್ಚಲು, ಕರೆದಾಕ್ಷಣ ಬರುವ ಸಿಪಾಯಿ ಶಿಸ್ತು, ತಪ್ಪೇ ಮಾಡಲಾರದ ಸಾತ್ವಿಕ ಮುಖಗಳು, ಜತೆಗೆ ಬಹುಮಟ್ಟಿಗೆ ಎಲ್ಲವೂ ತಾಯಂದಿರುಗಳು. ತಮ್ಮ ಹೆಸರು (ಗಂಗೆ, ಗೌರಿ, ತುಂಗಭದ್ರೆ, ಪುಣ್ಯಕೋಟಿ), ಬಗೆ ಇತ್ಯಾದಿಗಳಲ್ಲಿ ಸ್ವಚ್ಛತೆಯನ್ನು ಮೈಗೂಡಿಸಿಕೊಂಡಿರುವ ಜತೆಗೆ ಪ್ರವೃತ್ತಿಯಲ್ಲೂ ಕನಿಷ್ಠತೆಯ ಸೋಂಕಿನಿಂದ ಮುಕ್ತವಾದಂತೆಯೇ ಇರುವ ಈ ಕೊಟ್ಟಿಗೆಯ ಕಪಿಲೆಯರನ್ನು ಅಕ್ಷರ ಮತ್ತು ಮೌಖಿಕ ಪಠ್ಯಗಳೆರಡೂ ಅಚ್ಚುಹಾಕಿ ಕೊಡುತ್ತಾ ಹೋಗುತ್ತವೆ.
ತಿಂದು ಆಟವಾಡುವಾಗ ಒಂದು ತರದ ಫಜೀತಿಯಾದರೆ ಮಳೆಗಾಲದ ಕಥೆ ಬೇರೆಯದೇ. ಮಳೆಗಾಲದಲ್ಲಿ ಇವುಗಳ ಮೇವಿಗಾಗಿ ಬಯಲಿಗೆ ಎಬ್ಬುವಂತಿರಲಿಲ್ಲ. ಎಲ್ಲಾ ಗದ್ದೆಗಳು ನೇಜಿಗೊಂಡು ಸಾಗುವಳಿಗೆ ಒಳಪಟ್ಟಿರುತ್ತಿದ್ದುದರಿಂದ ಹುಲ್ಲಿನೊಂದಿಗೆ ಹಸಿರೆಲೆಗಳನ್ನು ಹೊಂದಿರುವ ಹಾಡಿ-ಗುಡ್ಡೆಗಳೆ ಅವಗಳ ಆಡುಂಬೊಲವಾಗುತ್ತಿತ್ತು. ಹಾಡಿ-ಗುಡ್ಡೆಗಳಲ್ಲಿ ಮೇಯಿಸುವಾಗ ನಮಗೆ ಆಟದ ಬಯಲು ಸಿಕ್ಕುವುದಿಲ್ಲ. ಆದರೆ ಆಟ ನಿಲ್ಲಬೇಕಲ್ಲ. ಚಿಕ್ಕಚಿಕ್ಕ ಕಲ್ಲುಗಳನ್ನು ಬಳಸಿ ಹೆಮ್ಮಕ್ಕಳ ಜೊತೆಗೆ ಗುಡ್ನಾಡುತ್ತಿದ್ದೆವು. ನೆಲದ ಕಿರುಜಾಗಗಳನ್ನೇ ಬಳಸಿ ಜುಬಲಿ(ಬೆಟ್ಟಾ) ಆಡುತ್ತಿದ್ದೆವು.ನೆಲದಲ್ಲಿಯೇ ಚನ್ನೆಮನೆಗಳನ್ನು ಮಾಡಿಕೊಂಡು ಚನ್ನೆಯಾಟಗಳನ್ನಾಡುತಿದ್ದೆವು. ಇದರ ಜೊತೆಗೆ ಬಹುವಿಧದ ಕಾಡುಹಣ್ಣುಗಳನ್ನು ಒಟ್ಹಾಕಿಕೊಂಡು ತಿನ್ನುತಿದ್ದುದು ಮಾಮೂಲಿಯಾಗಿತ್ತು. ನಮ್ಮ ಈ ಸುಖಕ್ಕಾಗಿ ಆಟ ಮತ್ತು ಹಣ್ಣು ಹುಡುಕಾಟದಲ್ಲಿ ಬೀಳುವ ಹೊತ್ತಿನಲ್ಲಿಯೇ ನಮ್ಮ ಕಣ್ತಪ್ಪಿಸಿಕೊಳ್ಳುವ ಅವುಗಳ ಮರಾಣಿ೧ ಸದ್ದೂ ಕೇಳಿಸದಂತಾದಾಗ ನಾವು ಗಾಬರಿ ಬೀಳುತ್ತಿದ್ದೆವು. ಮನೆಗೆ ಹೋಗುವ ಮುನ್ನವಾದರೂ ಕಣ್ಣಿಗೆ ಬಿದ್ದರೆ ಸಾಕು ಎಂದು ಹೊಳೆಕಡು, ಯಾರ್ಯಾರದೋ ಗದ್ದೆಕಡುವುಗಳನ್ನು ಹುಡುಕಿ ಎಲ್ಲಿಯೂ ಕಾಣದಂತಾದಾಗ ಹರಕೆಯ ಮೊರೆಹೋಗುತ್ತಿದ್ದೆವು. ನಮಗೆ ಸುಲಭದಲ್ಲಿ ಸಾಧ್ಯವಾಗುತ್ತಿದ್ದುದು ಮತ್ತು ಗುಟ್ಟಾಗಿ ಮನೆಯವರ ನೆರವಿಲ್ಲದೆ ಗೇರುಬೀಜ ಮಾರಿದ ದುಡ್ಡಿನಲ್ಲಿಯೇ ಒಂದೆರಡು ಲಾಡು,ಜಿಲೇಬಿಗಳ ತ್ಯಾಗ ಮಾಡುವಷ್ಟಕ್ಕೇ ಪೂರೈಸಬಹುದಾಗಿದ್ದ ಹರಕೆಯೆಂದರೆ ಸ್ವಾಮಿಮನೆಯ ನಿಂಗಮ್ಮನಿಗೆ ಕಪ್ಪುಬಳೆ ಹಾಕುವುದು. ಇಲ್ಲಾ ಗಣಪತಿ ದೇವರ ಡಬ್ಬಿಗೆ ೨-೩ಪೈಸೆ ಕಾಣಿಕೆ ಹಾಕುವುದು. ಇನ್ನೂ ಸ್ವಲ್ಪ ಜಾಸ್ತಿ ಗಾಬರಿಯಾದರೆ ದುಬಾರಿ ಹರಕೆಯಾಗಿ ಗಣಪತಿಗೆ ಒಂದು ರೂಪಾಯಿ ಪಂಜಕಜ್ಜಾಯ ಮಾಡಿಸುವುದು. ಈ ಹರಕೆಗಳಿಗೂ ಕೆಲವೊಮ್ಮೆ ದನಗಳು ದಕ್ಕದೇ ಇದ್ದಾಗ ಇದ್ದೇ ಇದೆ ದೇವರಿಗೆ ಹಿಡಿಶಾಪಹಾಕುವುದು ಮತ್ತು ಕೊನೆಗೆ ಮನೆಯಲ್ಲಿ ಬೆನ್ನಿಗೆ ಎಣ್ಣೆ ಉಜ್ಜಿಸಿಕೊಳ್ಳುವುದು. ಇವೆಲ್ಲವೂ ಅಂದಿನ ಹಸಿರಾದ ನೆನಪುಗಳು. ಈ ಗಂಟಿಕರುಗಳನ್ನು ಮೇಯಿಸುತ್ತಾ, ಮಳೆ ಬಂದಾಗ ಕಂಬ್ಳಿಕುಪ್ಪೆ ಹಾಕಿಕೊಂಡು ಓಡಾಡುವ ಸಂಕಟ ಪರಿಹಾರವಾಗಲಿ ಎಂಬ ಆಶಯದಿಂದ,-”ಹಾರ್ಮಳೆ ಬೋರ್ಮಳೆ ಬೋಳ್ಗುಡ್ಡೆಗ್ ನಾ ಕೂತಿದಿ ಹಾರಿಯೇ……..ಹೋಗ್, ಕೂರಿಯೇ……….ಬಾ” ಎಂಬಂತೆ ಮಳೆದೂರಾಗಬಯಸಿ ಹಾಡುತ್ತಿದ್ದ ಅಹವಾಲಿನ ಸೊಲ್ಲಾಗಲೀ; ತನ್ನ ಬಾಯಿಪತ್ತಿ(ಆಹಾರ)ಯನ್ನು ಬಯಸಿ
(ಆದರೆ ಜೀವಂತವಾದ) ಬೂಸಾ ತಿಂದು ಹಾಲು ಕರೆಯುವ ಯಂತ್ರ! ಬೆದೆಗೆ ಬಂದಾಗ ಪಶುವೈದ್ಯನ ಸೂಜಿಯ ಮೂಲಕ ಗರ್ಭಕಟ್ಟುವ, ಗಂಡುಕರುಗಳಾದರೆ ಹಾಲು ಕೊಡದೇ ಕೊಲ್ಲಲ್ಪಡುವ, ಏನೇನೊ ರೋಗದ ರೂಢಿಯಲ್ಲಿ ಮತ್ತೆ ಮತ್ತೆ ವ್ಯಾಕ್ಷಿನ್ ಪಡೆಯುವ ಈ ಪರದೇಶಿ ಹಸುವಿನೆದುರು ದೀಪಾವಳಿಯ ರಾತ್ರಿ ಗದ್ದೆಗೆ ಹಿಟ್ಟು ಬಡಿಸಿ ಬಂದ ಮೇಲೆ “ಆಸಾಡಿ ಹಬ್ಬದ ಆಸಿ ಕಂಡೆ, ದೀಪೋಳಿ ಹಬ್ಬದ ದೀಪ ಕಂಡೆ, ಮುಂದ್ ಬತ್ತ್ ಕೊಡಿ ಕಾಣ್” ಎಂದು ಹಾಡು ಹಾಡುತ್ತಾ ಹಿಟ್ಟು ನೀಡುವ ಅಮ್ಮ ಬದಲಾಗಲಿಲ್ಲ. ಅಮ್ಮನ ಸಿಕ್ಕ (ಮಜ್ಜಿಗೆ ತೂಗಿಡುವ ಸಾಧನ), ಕಿರ್ಗಾಲು, ಕಡಾಲು (ಕಡೆಗೋಲು)ಗಳು ಅಟ್ಟ ಹತ್ತಿವೆ/ಕಣ್ಮರೆಯಾಗಿವೆ. ಅಮ್ಮನ ಹಾಗೆಯೇ ಅಚ್ಚೊತ್ತಿ ನಿಂತ ನನ್ನ ಒಟ್ಟು ಹಸು ಕರುಗಳೆಂಬ ಸಂಗತಿಗಳ ಜತೆಗಿನ ಬಾಲ್ಯ ನನ್ನವರ ಹಸುವಿನ ಲೋಕದ ಪರಿಚಿತ ಮುಖವಾಗಿಯೇ ಉಳಿದುಕೊಂಡಿದೆ. ಹಾಗೆಯೇ ಇವತ್ತು ನಮ್ಮ ಹಟ್ಟಿಗಳಲ್ಲಿ ಅವತರಿಸಿರುವ ದೇವಲೋಕದ ನಂದಿನಿಯೆಂಬ ಹಾಲುಯಂತ್ರಗಳು ಅವುಗಳ ಗಂಡುಕರುಗಳ ಉದ್ದೇಶಿತ ಕೊಲೆಗಳು ನಮ್ಮ ಹಸಿಯಾದ ಹಸಿವೆಯ ಭಾಗವೇ ಆಗಿವೆ. ಹಾಗಾಗಿ ನಮ್ಮ ಪಾಲಿಗೆ ಹಸುವೆಂದರೆ ಕ್ಯಾಲೆಂಡರ್ಗಳಲ್ಲಿಯೋ, ವರ್ಣಚಿತ್ರಗಳಲ್ಲಿಯೋ ಮಮತೆಯ ಪೋಸ್ನಲ್ಲಿ ಅಂಟಿಸಲ್ಪಟ್ಟ ನಾಲ್ಕು ಕಾಲಿನ ಹುಲ್ಲು ತಿನ್ನುವ ದೇವರಲ್ಲ್ಲ. ಅಥವಾ ಹಸುಸಾಕದೇ ಪ್ಯಾಕೇಟ್ ಹಾಲು ಕುಡಿಯುವವರು ಕಲ್ಪಿಸಿಕೊಟ್ಟಿರುವ ಕಾಮಧೇನುವೊ, ಪುಣ್ಯಕೋಟಿಯೊ ಅಲ್ಲ. ಅದೊಂದು ಆಪ್ತವಾದ ಜೀವ. ಪ್ರೀತಿಗೆ ಕಾರಣವಾಗುತ್ತಾ ಬದುಕಿಗೆ ಆಧಾರವಾಗಬೇಕೆಂದು ಸಹಜ ಮನುಷ್ಯರಾದ ರೈತರು, ದನಗಾಹಿಗಳು ಇಲ್ಲಿಯವರೆಗೆ ಮತ್ತು ಇನ್ನು ಮುಂದು ಕೂಡ ಮುನ್ನಡೆಸಿಕೊಂಡು ಹೋಗುತ್ತಿರುವ ಪ್ರತ್ಯೇಕವಾದ ಲೋಕ. ಆ ಲೋಕದೊಳಗೆ ಪ್ರವೇಶ ಕಾಣದೆ ಮತ್ತು ಪ್ರವೇಶ ಬಯಸದ ಶುಭ್ರವಸನ ದಾರಿಗಳು ಭಾವಿಸುವಂತೆ ಒಂದೇ ಏಟಿಗೆ ಆರಾಧನೆ ಮಾಡಿಯೋ, ಪೂಜ್ಯತೆಯ ಸರಕಾಗಿ ಮ್ಯೂಸಿಯಂನಲ್ಲಿಟ್ಟೋ ಕೂರುವ ಜಗತ್ತಲ್ಲ ಅದು. ಹೊಟ್ಟೆಗೆ ತಣ್ಣೀರು ಬಟ್ಟೆ ಕಟ್ಟಿಕೊಳ್ಳಲಾರದೆ ಬಾಳಿನ ಬವಣೆಯಿಂದ ಬೇಯುವ ನೈಜ ಅನುಭವದ ಆ ಲೋಕದಲ್ಲಿ ಭಾವನೆಯಿದೆ, ಬದುಕಿದೆ, ವ್ಯವಹಾರವಿದೆ, ಬಳಕೆಯಿದೆ. ಇಂತಹ ಸಂಕೀರ್ಣ ಆಯಾಮದಲ್ಲಿ ನಿಜಗೊಳ್ಳುವ ಹಸುವಿನ ಲೋಕವನ್ನು ಯಾವುದೋ ಒಂದು ಚಿತ್ರಕ್ಕ್ಕೆ/ಪ್ರತಿಮೆಗೆ ಜೋತುಹಾಕಲಾಗದು. ಕಾಳಿಂಗನೆಂಬ ಗೊಲ್ಲನ ಲೋಕದಲ್ಲಿಯ ಗಂಗೆ, ಗೌರಿ, ತುಂಗೆಯರೂ ಅಲ್ಲಿದ್ದಾರೆ. ಹಾಗೆಯೇ (ಗೊಡ್ಡು) ಅಹಲ್ಯಾನಂತವರೂ ಅಲ್ಲಿದ್ದಾರೆ. ಅಂತಹ ಲೋಕದಲ್ಲಿ ದನ ಕಟ್ಟುವ ಹಟ್ಟಿಗಳು ದೇವಾಲಯವೂ ಆಗುತ್ತವೆ.(ತಾತ್ಕಾಲಿಕವಾಗಿ) ಕೆಲಹೊತ್ತಿನ ನಿಲ್ದಾಣಗಳೂ ಆಗುತ್ತವೆ. ಹಾಗೆಯೇ ಜೀತದ ಮನೆಯೂ ಆಗುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ ಹಟ್ಟಿಯಲ್ಲಿರುವುದು “ಕೊರಳಿಗೆ ಕಟ್ಟುವ ಹಗ್ಗಗಳೇ ವಿನಃ ಮಲ್ಲಿಗೆಯ ದಂಡೆಯಲ್ಲ.”


ಬಿಡುಗಡೆಯಾಯ್ತು. ಇದನ್ನು ಆದಿಮ ಪ್ರಕಾಶನದವರು ಪ್ರಕಟಿಸಿದ್ದಾರೆ.
ಇದು ಒಂದು ವರದಿಯಾಗುವ ಅಪಾಯದಿಂದ ಪಾರು ಮಾಡಿದ್ದು. “ಆದಿಮ ಲಿವಿಂಗ್ ಟೈಮ್ಸ್” ಪತ್ರಿಕೆಯಲ್ಲಿ ಪ್ರಕಟಗೊಂಡ ಇಲ್ಲಿನ ಬಹುಪಾಲು ಲೇಖನಗಳು ಆ ಪತ್ರಿಕೆಗೆ ಸದಾ ಅಂಟಿಕೊಳ್ಳುತ್ತಿದ್ದ ಅಕಡೆಮಿಕ್ ಚಿಂತನೆಗಳ ಕ್ಲೀಷೆಯಿಂದ ಪಾರುಮಾಡಿತು ಎಂದು ನಾನು ಭಾವಿಸುತ್ತೇನೆ.





1. 

