ಶುಕ್ರವಾರ, ಜೂನ್ 17, 2016

'ಸುಜಾತಮ್ಮ ಬಯಲಾಟ ಕಲಾ ಟ್ರಸ್ಟ್' ಅಸ್ತಿತ್ವಕ್ಕೆ


-ಸಿ.ಮಂಜುನಾಥ
  ಹಿರಿಯ ಬಯಲಾಟ ಕಲಾವಿದೆ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಾದ ಬಳ್ಳಾರಿಯ ಶ್ರೀಮತಿ ಸುಜಾತಮ್ಮ ಅವರ ಹೆಸರಿನಲ್ಲಿ 'ಸುಜಾತಮ್ಮ ಬಯಲಾಟ ಕಲಾ ಟ್ರಸ್ಟ್' ಅಸ್ತಿತ್ವಕ್ಕೆ ಬಂದಿದೆ. ಇದೇ ಜೂ.20 ರಂದು ಸೋಮವಾರ ಸಂಜೆ 6 ಗಂಟೆಗೆ ಬಳ್ಳಾರಿಯ ಸಾಂಸ್ಕೃತಿಕ ಸಮುಚ್ಛಯದ ಬಯಲು ರಂದಮಂದಿರದಲ್ಲಿ ಕರ್ನಾಟಕ ಬಯಲಾಟ ಮತ್ತು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ನಾಡೋಜ ಬೆಳಗಲ್ಲು ವೀರಣ್ಣ ಅವರು ಟ್ರಸ್ಟ್ ಉದ್ಘಾಟಿಸುವರು.ನಾಡೋಜ ಸುಭದ್ರಮ್ಮ ಮನ್ಸೂರು ಸೇರಿದಂತೆ ಸಾಂಸ್ಕೃತಿಕ ಲೋಕದ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುವರು.

ಕಾಮೆಂಟ್‌ಗಳಿಲ್ಲ: